For the best experience, open
https://m.justkannada.in
on your mobile browser.

ಬಿಜೆಪಿ-ಜೆಡಿಎಸ್ ಮೈತ್ರಿ ಶಾಶ್ವತ- ಬಿ.ವೈ ವಿಜಯೇಂದ್ರ.

01:29 PM Apr 04, 2024 IST | prashanth
ಬಿಜೆಪಿ ಜೆಡಿಎಸ್ ಮೈತ್ರಿ ಶಾಶ್ವತ  ಬಿ ವೈ ವಿಜಯೇಂದ್ರ

ಹಾಸನ, ಏಪ್ರಿಲ್ 4,2024 (www.justkannada.in): ಬಿಜೆಪಿ- ಜೆಡಿಎಸ್ ಮೈತ್ರಿ  ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ. ಮೈತ್ರಿ ಶಾಶ್ವತವಾದದ್ದು. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ  ನುಡಿದರು.

ಜೆಡಿಎಸ್- ಬಿಜೆಪಿ ಮೈತ್ರಿ​ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿವೈ ವಿಜಯೇಂದ್ರ, ಹೆಚ್.ಡಿ.ರೇವಣ್ಣ, ಡಿ.ವಿ.ಸದಾನಂದ ಗೌಡ ಉಪಸ್ಥಿತರಿದ್ದರು.

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ, ಬಿವೈ ವಿಜಯೇಂದ್ರ, ಪ್ರಧಾನಿ ಮೋದಿ ಅವರಿಗಾಗಿ ಹೆಚ್​ ಡಿ ದೇವೇಗೌಡರು ಮೈತ್ರಿ ಮಾಡಿಕೊಂಡಿದ್ದಾರೆ. ದೇವೇಗೌಡರು ಖುದ್ದು ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ರೈತ, ದಲಿತ ವಿರೋಧಿ ಕಾಂಗ್ರೆಸ್​ ಪಕ್ಷವನ್ನು ದೇಶದಿಂದ ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ನಮ್ಮೆಲ್ಲರ ಹಿರಿಯರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿರಲಿಲ್ಲ. ಈ ಚುನಾವಣೆಯಲ್ಲಿ ದೇವೇಗೌಡರ ಆಶೀರ್ವಾದ ನಮ್ಮ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.

ಹಾಸನ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ನಾವು ಕೆಲಸ ಮಾಡಬೇಕು  ಎಂದು ಬಿವೈ ವಿಜಯೇಂದ್ರ ಕರೆ ನೀಡಿದರು.

Key words: BJP, JDS, alliance, BY Vijayendra

Tags :

.