HomeBreaking NewsLatest NewsPoliticsSportsCrimeCinema

ಕೊಟ್ಟ ಮಾತು ಈಡೇರಿಸದ ಬಿಜೆಪಿ, ಇವರ ಜೊತೆ ಸೇರಿರುವ ಜೆಡಿಎಸ್ ಗೆ ಮತ ಕೇಳುವ ನೈತಿಕತೆ ಇಲ್ಲ- ಸಿಎಂ ಸಿದ್ದರಾಮಯ್ಯ.

06:27 PM Apr 18, 2024 IST | prashanth

ಚಿಕ್ಕಬಳ್ಳಾಪುರ, ಏಪ್ರಿಲ್‌, 18,2024 (www.justkannada.in): ಕೊಟ್ಟ ಮಾತು ಈಡೇರಿಸದ ಬಿಜೆಪಿ, ಇವರ ಜೊತೆ  ಕೈ ಜೋಡಿಸಿರುವ ಜೆಡಿಎಸ್ ಗೆ  ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.

ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಪ್ರಧಾನಿ ಮೋದಿ ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸಿಲ್ಲ. ಈ ಮೂಲಕ ದೇಶದ ಜನರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ. ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.

ಇದೇ ವೇಳೆ ಹೆಚ್.ಡಿ ದೇವೇಗೌಡರ ವಿರುದ್ದವೂ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ,  ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರೇ ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎನ್ನುವುದು ಬರೀ ದೇವೇಗೌಡರ ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಹೇಳಿದರು.

Key words: BJP, JDS, no morals, CM, Siddaramaiah

Tags :
BJPCMJDSno moralsSiddaramaiah
Next Article