HomeBreaking NewsLatest NewsPoliticsSportsCrimeCinema

ಶಾಸಕ ಎಂದಾಕ್ಷಣ ಪೊಲೀಸರಿಗೆ ಬೆದರಿಕೆ ಹಾಕಬಹುದಾ? ಕಾನೂನು ಎಲ್ಲರಿಗೊ ಒಂದೇ- ಸಿಎಂ ಸಿದ್ದರಾಮಯ್ಯ ಕಿಡಿ.

04:07 PM May 25, 2024 IST | prashanth

ಮಂಗಳೂರು,ಮೇ,25,2024 (www.justkannada.in): ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಎಂದಾಕ್ಷಣ ಪೊಲೀಸರಿಗೆ ಬೆದರಿಕೆ ಹಾಕಬಹುದಾ? ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಐಪಿಸಿ 353ರ ಪ್ರಕಾರ  ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ತಿಳಿಸಿದರು.

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್  ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ  ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಸಿಎಂ ಸಿದ್ದರಾಮಯ್ಯ ಮರುಪ್ರಶ್ನಿಸಿದರು.

ENGLISH SUMMARY..

MLA Harish Poonja alleged for intimidating police

Law is same for all : Chief Minister Siddaramaiah

Mangalore, May 25: Chief Minister Siddaramaiah said that an FIR has been registered under IPC 353 in connection with the case of police intimidation by MLA Harish Poonja.

He was speaking to the media at Mangalore International Airport today.

Reacting to the opposition's allegation that the Congress is compelling for the arrest of BJP MLA Harish Poonja, the CM said that the law is the same for everyone. An FIR has been registered under IPC 353, which is a non-bailable offence. According to this law, there is a possibility of 7 years imprisonment. Should the allegations against Harish Poonja be denied just because he is an MLA, the CM asked.

Responding to Harish Poonja getting station bail, the CM said that two cases of threatening police have been registered against him. The Chief Minister asked if he could threaten the police just because he is an MLA.

Key words: BJP, MLA, Harish punja, CM Siddaramaiah

Tags :
BJP-MLA-Harish punja-CM Siddaramaiah
Next Article