ನೇಹಾ ಕೊಲೆ ಪ್ರಕರಣವನ್ನ ಬಿಜೆಪಿ ರಾಜಕೀಯಕ್ಕೆ ಬಳಕೆ- ಸಿಎಂ ಸಿದ್ದರಾಮಯ್ಯ ಕಿಡಿ.
12:30 PM Apr 20, 2024 IST
|
prashanth
ಮೈಸೂರು,ಏಪ್ರಿಲ್,20,2024 (www.justkannada.in): ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನ ಬಿಜೆಪಿಯು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇದು ದುರ್ದೈವದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದೆ ತೀವ್ರವಾಗಿ ಖಂಡಿಸುತ್ತೇನ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಬಿಜೆಪಿ ಈ ವಿಚಾರವನ್ನ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ.
ಎಲ್ಲರ ಅಧಿಕಾರವಧಿಯಲ್ಲಿ ಕೊಲೆಗಳಾಗಿದೆ. ಬಿಜೆಪಿ ನಾಯಕರು ಪ್ರತಿಭಟನೆಮಾಡುತ್ತಿದ್ದಾರೆ ಮಾಡಲಿ. ಕಾನೂನು ವಿಚಾರದಲ್ಲಿ ಸುವ್ಯವಸ್ಥೆ ವಿಚಾರದಲ್ಲಿ ಗಂಭೀರವಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Key words: BJP, Neha, murder case, politics, Siddaramaiah
Next Article