HomeBreaking NewsLatest NewsPoliticsSportsCrimeCinema

ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿ  ರಘುಪತಿ ಭಟ್ ಗೆ ಬಿಜೆಪಿ ನೋಟಿಸ್.

04:18 PM May 23, 2024 IST | prashanth

ಬೆಂಗಳೂರು,ಮೇ,23,2024 (www.justkannada.in): ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿ ಶಿಸ್ತುಸಮಿತಿ ನೋಟಿಸ್ ಜಾರಿ ಮಾಡಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ನೈರುತ್ಯ ಪದವೀಧರ ಕ್ಷೇತ್ರದಿಂದ ಮಾಜಿ ಶಾಸಕ ರಘುಪತಿ ಭಟ್​ ಬಂಡಾಯವಾಗಿ ಸ್ಪರ್ಧಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ನೋಟಿಸ್​ ಜಾರಿ ಮಾಡಿದೆ. ಪರಿಷತ್ ಚುನಾವಣೆಯಲ್ಲಿ ಬಂಡಾಯವಾಗಿ ಸ್ಪರ್ಧೆ ಮಾಡುವುದು ಪಕ್ಷದ ಶಿಸ್ತು ಉಲ್ಲಂಘನೆಯಾಗುವುದು. ಹೀಗಾಗಿ ಪತ್ರ ತಲುಪಿದ ಎರಡು ದಿನಗಳ ಒಳಗೆ ಸ್ಪಷ್ಟೀಕರಣ ನೀಡಬೇಕು ಬಿಜೆಪಿ ಶಿಸ್ತುಸಮಿತಿ ನೋಟಿಸ್​ನಲ್ಲಿ ತಿಳಿಸಿದೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಬಂಡಾಯ ಸ್ಪರ್ಧೆಗೆ ಸ್ಪಷ್ಟನೆ ನೀಡಿ ಎರಡು ದಿನಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿಸಚಿವ ಸುನೀಲ್ ಕುಮಾರ್, ರಘುಪತಿ ಭಟ್ ಅವರು  24 ಗಂಟೆಯೊಳಗೆ ಚುನಾವಣಾ ಕಣದಿಂದ ಹಿಂದೆ ಸರಿಯಬೇಖು ಇಲ್ಲವಾದಲ್ಲಿ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Key words: BJP, notice, Raghupathi Bhat

Tags :
BJP -notice - rebel candidate -Raghupathi Bhatt.
Next Article