For the best experience, open
https://m.justkannada.in
on your mobile browser.

ನಮ್ಮಲ್ಲಿ ಒಳಜಗಳ ಇಲ್ಲ: ಬಿಜೆಪಿಯದ್ದು ಕೇವಲ ರಾಜಕೀಯ ಹೇಳಿಕೆ- ಸಿಎಂ ಸಿದ್ದರಾಮಯ್ಯ.

02:54 PM May 14, 2024 IST | prashanth
ನಮ್ಮಲ್ಲಿ ಒಳಜಗಳ ಇಲ್ಲ  ಬಿಜೆಪಿಯದ್ದು ಕೇವಲ ರಾಜಕೀಯ ಹೇಳಿಕೆ  ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ, 14,2024 (www.justkannada.in):  ನಮ್ಮಲ್ಲಿ ಯಾವುದೇ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ಕೇವಲ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ  ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ  ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು  ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ  ಎಂದರು.

ಉತ್ತಮ ವಾತಾವರಣ

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

ಪರಿಣಾಮ ಬೀರುವುದಿಲ್ಲ

ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ  ಮೈತ್ರಿ  ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು  ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.

ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.

ಹಿಟ್ ಅಂಡ್ ರನ್ ಕೇಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ .ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ  ಹಿಟ್ ಅಂಡ್ ರನ್ ಕೇಸ್ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ

ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ENGLISH SUMMARY...

We have no infighting: Chief Minister Siddaramaiah

Mysuru, May-14: Chief Minister Siddaramaiah said that there is no infighting in the party. If that was the case, we would not have been able to work together in the Lok Sabha elections.

Speaking to the media at the Mysuru airport, he was responding to the statement made by the BJP leaders that the government
would fall due to fight within the Congress party, he said that they are making a political statement.

Good atmosphere
'The atmosphere of the Parishad elections is good and this time the Congress party has taken the election seriously. For that reason the candidates were selected six months in advance. He said that the candidates got time and got an opportunity to meet the voters.

Will not have any effect
Responding to the question whether the alliance will affect the election, he said that that the JDS had formed an alliance with BJP in the Lok Sabha elections as well, and it will not have any effect.

Voters have the power to compare achievements

Reacting to a question if Prajwal Revanna pen drive case will affect the elections, the CM said that the voters from the graduates and teacher's constituencies are politically mature, they are aware of what is right and wrong. He said that they have the ability to compare the achievements of the central government and the achievements of our government.

Talking about campaigning for elections in other states, he said that he has received an invitation to campaign.

Hit and Run Case
Talking about former Chief Minister HD Kumaraswamy's statement that he has a pen drive about corruption and that if the government has the power to investigate, he will release it, the CM said that Kumaraswamy's is always a hit and run case.

Let them save their government first
Speaking about the Maharashtra CM's statement regarding Karnataka government's collapse, the CM said that instead of talking about our government, let them first save their government.

Key words: BJP, political, statement, CM Siddaramaiah

Tags :

.