For the best experience, open
https://m.justkannada.in
on your mobile browser.

ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ.

12:45 PM May 23, 2024 IST | prashanth
ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ

ಬೆಂಗಳೂರು,ಮೇ,23,2024 (www.justkannada.in):  ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಕೆಲ ಕಾಲ ಚರ್ಚೆ ನಡೆಸಿದ್ದಾರೆ.  ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಭೇಟಿ ಮಹತ್ವ ಪಡೆದಿದ್ದು, ಪ್ರಭಾಕರ್ ಕೋರೆ ಹಲವು ಶಿಕ್ಷಣ ಸಂಸ್ಥೆಗಳನ್ನ ಹೊಂದಿದ್ದಾರೆ.

Key words: BJP, Prabhakar Kore, met, DK Shivakumar

Tags :

.