HomeBreaking NewsLatest NewsPoliticsSportsCrimeCinema

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ.

12:41 PM Dec 01, 2023 IST | prashanth

ಬೆಂಗಳೂರು,ಡಿಸೆಂಬರ್, 1,2023(www.justkannada.in):  ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಸಂಬಂಧ ಸೂಕ್ತ ಕ್ರಮ  ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ, ಎನ್​​ಪಿಎಸ್, ಕಾರ್ಮೆಲ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ 15 ಶಾಲೆಗಳಿಗೆ ಆಡಳಿತ ಮಂಡಳಿಯ ಇ-ಮೇಲ್ ​ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದೇನೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದೆ. ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಗೊತ್ತಾಗಿದೆ. ಕೂಡಲೇ ಆಡಳಿತ ಮಂಡಳಿಗಳು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳಿಸಿದ್ದು ಶಾಲೆಗಳಿಗೆ ರಜೆ ಘೋಷಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Key words: Bomb threat - Bangalore schools- CM Siddaramaiah -instructs - appropriate action.

Tags :
appropriate actionBomb threat - Bangalore schools- CM Siddaramaiahinstructs
Next Article