ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧಿಸದಂತೆ ಹೈಕೋರ್ಟ್ ಆದೇಶ
ಬೆಂಗಳೂರು,ಜೂನ್,14,2024 (www.justkannada.in): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಬಂಧಸದಂತೆ ಹೈಕೋರ್ಟ್ ಆದೇಶಿಸಿದೆ.
ಪೋಕ್ಸೋ ಪ್ರಕರಣ ರದ್ದು ಕೋರಿ ಬಿಎಸ್ ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಕೃಷ್ಣ ಎಸ್.ದೀಕ್ಷಿತ್ ರಿದ್ದ ಏಕಸದಸ್ಯ ಪೀಠವು ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಿದಂತೆ ಆದೇಶ ಹೊರಡಿಸಿದೆ. ತನಿಖೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಸೂಚನೆ ನೀಡಿದೆ.
ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿಎಸ್ ವೈ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು. ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ವಿರುದ್ದ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಬಿಎಸ್ ವೈಗೆ ಬಂಧನ ಭೀತಿ ಎದುರಾಗಿತ್ತು.
Key words: BS Yeddyurappa, High Court, order, not, arrest