ಹೈಕೋರ್ಟ್ ನಲ್ಲಿ ನಾಳೆ ಮಾಜಿ ಸಿಎಂ ಯಡಿಯೂರಪ್ಪ POCSO ಪ್ರಕರಣದ ವಿಚಾರಣೆ
ಬೆಂಗಳೂರು, ಆ,29,2024: (www.justkannada.in news) ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಾಳೆ ಹೈಕೋರ್ಟ್ ನಲ್ಲಿ ನಡೆಯಲಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಬಿಎಸ್ವೈ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗೆ ಹಾಜರಾಗಲು ಈ ಹಿಂದೆ ನೀಡಿದ್ದ ವಿನಾಯ್ತಿಯನ್ನು ವಿಸ್ತರಿಸಿ ಈ ಹಿಂದೆ ಆದೇಶ ಹೊರಡಿಸಿತ್ತು.
ಇದೇ ವೇಳೆ ಯಡಿಯೂರಪ್ಪರವನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಕೋರಿ ಸಂತ್ರಸ್ತೆಯ ಪರ ವಕೀಲರು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತ್ತು.
ಪ್ರಕರಣದ ಹಿನ್ನೆಲೆ:
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್.
ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು.
ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು
key words: Former CM, BS Yediyurappa, to hear, POCSO case, in HC tomorrow