ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ ವಿಚಾರ: ಕೊನೆಗೂ ಮೌನ ಮುರಿದ ಮಾಜಿ ಸಚಿವ ವಿ.ಸೋಮಣ್ಣ.
ಬೆಂಗಳೂರು,ನವೆಂಬರ್,16,2023(www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾಗಿರುವ ವಿಚಾರ ಕುರಿತು ಮಾಜಿ ಸಚಿವ ವಿ.ಸೋಮಣ್ಣ ಕೊನೆಗೂ ಮೌನ ಮುರಿದಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ವಿ.ಸೋಮಣ್ಣ, ವಿಜಯೇಂದ್ರ ಬಗ್ಗೆ ಮಾತನಾಡಲು ಇನ್ನೂ ಕಾಲ ಬಂದಿಲ್ಲ. ವಿಜಯೇಂದ್ರ ವಿಚಾರಕ್ಕೆ ಕಾಲವೇ ಉತ್ತರ ಕೊಡಲಿದೆ. ಪಕ್ಷಕ್ಕೆ ನನ್ನದೂ ದುಡಿಮೆ, ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ಅಭಿಪ್ರಾಯವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಒಬ್ಬ ಕೆಲಸ ಮಾಡುವವನಿಗೆ, ಪಾಪ್ಯುಲರ್ ಆದವರಿಗೆ ಮುಜುಗರದ ಸಂಗತಿಗಳು ಎದುರಾಗುತ್ತವೆ. ನಾನು ಯಾವುದೇ ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ ಎಂದರು.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಜತೆ ಚರ್ಚೆ ನಡೆಸಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿ.ಸೋಮಣ್ಣ, ಅದೆಲ್ಲಾ ನಡೆಯುತ್ತಿರುತ್ತೆ. ಆದರೆ ಕಾಂಗ್ರೆಸ್ ಸೇರುವ ಅವಶ್ಯಕತೆ ನನಗೆ ಈಗಿಲ್ಲ ಎಂದು ತಿಳಿಸಿದರು.
Key words: BY Vijayendra - BJP -State –President-Former Minister -V. Somanna