ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ.
ನವದೆಹಲಿ, ಫೆಬ್ರವರಿ,10,2024(www.justkannada.in): ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು(CAA) ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಗ್ಲೋಬಲ್ ಬಿಸಿನೆಸ್ ಶೃಂಗಸಭೆಯಲ್ಲಿ ಮಾತನಾಡಿದ ಕೇಂದ್ರಗೃಹ ಸಚಿವ ಅಮಿತ್ ಶಾ ಅವರು, , ವಿರೋಧ ಪಕ್ಷದವರು ಮುಸ್ಲಿಂ ಸಹೋದರರನ್ನು ದಾರಿತಪ್ಪಿಸುತ್ತಿದ್ದಾರೆ. ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳ ಎದುರಿಸಿ ಭಾರತಕ್ಕೆ ಬಂದವರಿಗೆ ಮಾತ್ರ ಪೌರತ್ವವನ್ನು ನೀಡುವುದು ಸಿಎಎ ಉದ್ದೇಶವಾಗಿದೆ. ಇದನ್ನು ಯಾವುದೇ ಭಾರತೀಯರ ಪೌರತ್ವವನ್ನು ಕಸಿದುಕೊಳ್ಳುವುದಕ್ಕೆ ಬಳಸುವುದಿಲ್ಲ' ಎಂದು ತಿಳಿಸಿದರು.
ಏಕರೂಪ ನಾಗರಿಕ ಸಂಹಿತೆ ಕುರಿತು ಮಾತನಾಡಿದ ಅಮಿತ್ ಶಾ, ಏಕರೂಪ ನಾಗರಿಕ ಸಂಹಿತೆಯ ಎಂಬುದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸೇರಿದಂತೆ ಇತರೆ ನಾಯಕರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ ಎಂದು ತಿಳಿಸಿದರು.
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ ಡಿ ಎ 400ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದ್ದು ಈ ಮೂಲಕ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬರುತ್ತೇವೆ. ಈ ಬಾರಿಯೂ ಕಾಂಗ್ರೆಸ್ ಮತ್ತು ಅದನ್ನು ಬೆಂಬಲಿಸುವ ಪಕ್ಷಗಳು ವಿರೊಧ ಪಕ್ಷ ಸ್ಥಾನದಲ್ಲೇ ಕೂರಲಿವೆ ಎಂದು ಅಮಿತ್ ಶಾ ಹೇಳಿದರು.
Key words: CAA –implementation- before- Lok Sabha- elections- Union Home Minister- Amit Shah