ರಾಜ್ಯದಲ್ಲಿ ನೀಟ್ ರದ್ದು ಮಾಡುವ ಅವಕಾಶ ಕಾನೂನಿನಲ್ಲಿ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್
01:07 PM Jun 20, 2024 IST | prashanth
ಬೆಂಗಳೂರು,ಜೂನ್,20,2024 (www.justkannada.in): ರಾಜ್ಯದಲ್ಲಿ ನೀಟ್ ಪರೀಕ್ಷೆ ರದ್ದು ಮಾಡುವ ಅವಕಾಶ ಕಾನೂನಿನಲ್ಲಿ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಇಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ , ರಾಜ್ಯದಲ್ಲಿ ನೀಟ್ ಪರೀಕ್ಷೆ ರದ್ದು ಮಾಡುವ ಕುರಿತು ಕಾನೂನಿನಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ನೀಟ್ ರದ್ದು ಮಾಡುವುದು ಕಾನೂನು ತೊಡಕಗಾಬಹುದು. ಸುಪ್ರೀಂಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ಕುರಿತು ಪ್ರತಿಕ್ರಿಯಿಸಿದ ಸಚಿವ ಶರಣಪ್ರಕಾಶ್ ಪಾಟೀಲ್, ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಅತಂಕದಲ್ಲಿದ್ದಾರೆ. ಸೂಕ್ತ ಕ್ರಮ ಆಗಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನಿನ್ನೆ ನೆಟ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ದೇಶದ ಯುವಕರ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟ ಆಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Key words: cancel, NEET, Minister , Sharanprakash Patil