ಅರ್ಜುನ ಆನೆ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ ನಡೆಸಿದವರ ವಿರುದ್ದ ಪ್ರಕರಣ ದಾಖಲು.
04:56 PM Dec 06, 2023 IST
|
prashanth
ಹಾಸನ,ಡಿಸೆಂಬರ್,6,2023(www.justkannada.in): ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಯಿಂದ ಮೃತಪಟ್ಟ ಅರ್ಜುನ ಆನೆಯ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ ನಡೆಸಿದ್ದವರ ವಿರುದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆ ಅರ್ಜುನನನ್ನು ಯಸಳೂರು ವಲಯದ ದಬ್ಬಳ್ಳಿಕಟ್ಟೆ ಸಮೀಪ KFDC ನೆಡು ತೋಪಿನಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅರ್ಜುನನ ಅಂತ್ಯಕ್ರಿಯೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರು.
ಇದೀಗ 20 ಜನರು ಮತ್ತುಇತರರ ವಿರುದ್ದ ಯಸಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
Key words: case – registered- against - protester - funeral –Arjuna- elephant.
Next Article