ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್: ರಾಜ್ಯ ಸರ್ಕಾರದ ನಿರ್ಣಯ ಕಾನೂನು ಬಾಹಿರ-ಬಿವೈ ವಿಜಯೇಂದ್ರ ಟೀಕೆ.
ಬೆಂಗಳೂರು,ನವೆಂಬರ್,24,2023(www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದ ನಿರ್ಣಯ ಕಾನೂನು ಬಾಹಿರ ಎಂದು ಟೀಕಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನಿನ ವಿರುದ್ದವಾಗಿ ನಿರ್ಣಯ ಕೈಗೊಂಡಿದ್ದು ಡಿ.ಕೆ.ಶಿವಕುಮಾರ್ರನ್ನು ಉಳಿಸಲು ಮುಂದಾಗಿದೆ. ಸರ್ಕಾರದ ಈ ನಿರ್ಧಾರ ದಯರದೃಷ್ಟಕರ. ಡಿಕೆ ಶೀವಕುಮಾರ್ ಅವರೇ ಈ ನಿರ್ಧಾರವನ್ನ ವಿರೋಧಿಸಬೇಕಿತ್ತು. ಆದರೂ ಸಹ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ. ನೀವು ತಪ್ಪು ಮಾಡಿಲ್ಲ ಎನ್ನವುದನ್ನ ತನಿಖೆ ಎದುರಿಸಿ ತೋರಿಸಿ ಎಂದು ಸವಾಲು ಎಸೆದರು.
ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಲ್ಲ. ಪ್ರಾಥಮಿಕ ತನಿಖೆ ಮಾಹಿತಿ ಆಧರಿಸಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: CBI- case- against- DK Shivakumar- decision- illegal-BY Vijayendra