ಎಸ್ ಐಟಿ ತನಿಖೆಗೆ ಸಹಕಾರ ನೀಡಲು ಕೇಂದ್ರ ಸಿದ್ದವಿದೆ- ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ,ಮೇ,23,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಗೆ ಮತ್ತೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ವಿಚಾರ ಸಂಬಂಧ ವಿದೇಶದಲ್ಲಿರುವವರನ್ನ ಕರೆ ತರಲು ಅದರದ್ದೇ ಆದ ನಿಯಮವಿದೆ. ಪ್ರಕರಣದಲ್ಲಿ ಎಸ್ ಐಟಿ ತನಿಖೆಗೆ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡುತ್ತಿದೆ. ಪಾಸ್ ಪೋರ್ಟ್ ರದ್ದಿಗೆ ಅದರದ್ದೇ ಆದ ಪ್ರಕ್ರಿಯೆಗಳು ಇದೆ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಕೋರ್ಟ್ ನಲ್ಲಿ ಅರ್ಜಿ ಹಾಕಲಾಗಿದೆ. ಪತ್ರ ಬರೆದ ತಕ್ಷಣ ಪಾಸ್ ಪೋರ್ಟ್ ರದ್ದು ಅಂತಲ್ಲ. . ಎಸ್ ಐಟಿಗೆ ಸಹಕಾರ ನೀಡಲು ಕೇಂದ್ರ ಸಿದ್ದವಿದೆ. ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನ ಕೇಂದ್ರ ಮಾಡುತ್ತಿದೆ ಎಂದರು.
ನನ್ನ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿಲ್ಲ. ಪ್ರಜ್ವಲ್ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21 ಆದರೆ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದು ಏಪ್ರಿಲ್ 27 ರಂದು. ಹಾಗಾದರ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದರಾ..? ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.
Key words: Center, SIT, investigation, Prahlad Joshi