ಐಟಿ ಮತ್ತು ಇಡಿ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಬಿಜೆಪಿ ಸಂಚು-ಸಚಿವ ಪ್ರಿಯಾಂಕ್ ಖರ್ಗೆ ಆರೋಪ.
01:02 PM Nov 24, 2023 IST
|
prashanth
ಬೆಂಗಳೂರು,ಡಿಸೆಂಬರ್,24,2023(www.justkannada.in): ಐಟಿ ಮತ್ತು ಇಡಿ ಮೂಲಕ ವಿಪಕ್ಷಗಳ ನಾಯಕರ ವಿರುದ್ಧ ಕೇಂದ್ರ ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ಬಿಜೆಪಿ ವಿಪಕ್ಷವನ್ನ ಮುಗಿಸಲು ಸಂಚು ಮಾಡುತ್ತಿದೆ. ವಿಪಕ್ಷದವರ ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ ಮತ್ತು ಇಡಿ ಮೂಲಕ ಹೆದರಿಸುತ್ತಿದೆ. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದರು.
ಅಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ದ ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು ರೂಪಿಸುವ ಕೆಲಸ ಮಾಡಿತ್ತು. ಕೊಲೆ ಮಾಡಿದರೂ ಪರವಾಗಿಲ್ಲ ಅಂತವರಿಗೆ ಏನೂ ಆಗಿಲ್ಲ. ಆದರೆ ನಮ್ಮನ್ನು ಮಾತ್ರ ಹೆದರಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
Key words: Central -BJP - IT – ED- against -Congress leaders- Minister- Priyank Kharge
Next Article