ಯುವಕರಿಗೆ ಗುಡ್ ನ್ಯೂಸ್: 5 ವರ್ಷದಲ್ಲಿ 4.1 ಕೋಟಿ ಉದ್ಯೋಗ - ನಿರ್ಮಲಾ ಸೀತಾರಾಮನ್
ನವದೆಹಲಿ,ಜುಲೈ,23,2024 (www.justkannada.in): ಯುವಕರ ಹೊಸ ಉದ್ಯೋಗಕ್ಕಾಗಿ 5 ಹೊಸ ಯೋಜನೆ ಜಾರಿ ಮಾಡಲಾಗುತ್ತದೆ. 5 ವರ್ಷದಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸಲು ಒತ್ತು ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಇಂದು ಲೋಕಸಭೆಯಲ್ಲಿ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ ಎಂದರು.
ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು. ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್ ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
Key words: Central Budget, 4.1 crore, jobs, Nirmala Sitharaman