ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ,ಜುಲೈ,23,2024 (www.justkannada.in): ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದ್ದಾರೆ.
ಉಚಿತ ಸೌರ ವಿದ್ಯುತ್ ಯೋಜನೆ ಕುರಿತು ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ. ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್ ಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು.
ಇನ್ನು ಎನ್‌ಟಿಪಿಸಿ ಮತ್ತು ಬಿಎಚ್‌ಇಎಲ್ ನಡುವಿನ ಜಂಟಿ ಉದ್ಯಮವು AUSC (ಅಡ್ವಾನ್ಸ್‌ಡ್ ಅಲ್ಟ್ರಾ ಸೂಪರ್‌ಕ್ರಿಟಿಕಲ್) ತಂತ್ರಜ್ಞಾನವನ್ನು ಬಳಸಿಕೊಂಡು 100 MW ವಾಣಿಜ್ಯ ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಿದೆ. ದೇಶದಲ್ಲಿ ಸಣ್ಣ ರಿಯಾಕ್ಟರ್‌ಗಳ ಸ್ಥಾಪನೆ, ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಪರಮಾಣು ಶಕ್ತಿಗಾಗಿ ಹೊಸ ತಂತ್ರಜ್ಞಾನಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಭಾರತವು ಖಾಸಗಿ ವಲಯದೊಂದಿಗೆ ಪಾಲುದಾರಿಕೆ ಹೊಂದಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Key words: Central Budget, Nirmala Sitharaman, free electricity scheme