For the best experience, open
https://m.justkannada.in
on your mobile browser.

‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ: 1ಕೋಟಿ ಮನೆಗಳಿಗೆ ಉಚಿತ ವಿದ್ಯುತ್- ನಿರ್ಮಲಾ ಸೀತಾರಾಮನ್.

12:00 PM Feb 01, 2024 IST | prashanth
‘ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ  1ಕೋಟಿ ಮನೆಗಳಿಗೆ ಉಚಿತ ವಿದ್ಯುತ್  ನಿರ್ಮಲಾ ಸೀತಾರಾಮನ್

ನವದೆಹಲಿ,ಫೆಬ್ರವರಿ ,1,2024(www.justkannada.in):  ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್‌ ಅವರು ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು ಲಕ್ಷಾಧೀಪತಿ ದೀದಿ ಯೋಜನೆ’ ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್, ಲಕ್ಷಾಧೀಪತಿ ದೀದಿ ಯೋಜನೆಯಡಿ 1 ಕೋಟಿ ಮಹಿಳೆಯರು ಲಕ್ಷಾಧಿಪತಿ ದೀದಿ ಆಗಲಿದ್ದಾರೆ. ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಹತ್ತಿರದಲ್ಲಿದ್ದೇವೆ. ಕುಟುಂಬಗಳ ಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ಅಗತ್ಯವನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ ಎಂದು ತಿಳಿಸಿದರು.

Key words: central- budget- -Union Minister- Nirmala Sitharaman.

Tags :

.