For the best experience, open
https://m.justkannada.in
on your mobile browser.

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ-  ಸಿಎಂ ಸಿದ್ದರಾಮಯ್ಯ ಆರೋಪ.

05:05 PM May 03, 2024 IST | prashanth
ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ   ಸಿಎಂ ಸಿದ್ದರಾಮಯ್ಯ ಆರೋಪ

ಮುಂಡಗೋಡು, ಮೇ, 3,2024 (www.justkannada.in): ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.

ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.

ಸಂತ್ರಸ್ತ ಮಹಿಳೆಗೆ ರಕ್ಷಣೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿರುವುದಾಗಿ  ಸಿಎಂ ಸಿದ್ದರಾಮಯ್ಯ ಹೇಳಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು.

ಅಮಿತ್ ಶಾ ರಾಜಕೀಯ ಹೇಳಿಕೆ

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು.

ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಅಧಿಕಾರ ಉಳಿಸಿಕೊಳ್ಳಲು, ಬಿಜೆಪಿ ಮಾಡಬಾರದ್ದನ್ನು ಮಾಡುತ್ತಿದೆ

ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.

ENGLISH SUMMARY

Central Government is protecting Prajwal Revanna: CM Siddaramaiah

Mundagodu, May 03; Chief Minister Siddaramaiah said that the central government is protecting Prajwal Revanna.

He was speaking to the media at the Bagalkote helipad today.

Passport and visa check is done when someone travels internationally. He said that no one can go outside the country without the knowledge of the central government.

Talking about Prajwal Revanna's moving to Dubai, the CM said we will bring him from whichever country he is in. He must come to the country. He said that he has written to the Prime Minister to cancel the diplomatic passport of Prajwal Revanna.

Prajwal Revanna is accused of rape

The CM said that Prajwal Revanna is accused of rape and sexual harassment. He said BJP has allied with JDS despite knowing about Prajwal Revanna’s case.

Protection for victims

The Chief Minister said that in the case of Prajwal Revanna, he has directed to provide protection to the victim.

Why did Kumaraswamy and Deve Gowda call lawyers to their house and discuss. During an election campaign Kumaraswamy has said that ‘I am not different, Prajwal Revanna is not different’ He said that they do politics and such actions are done together.

Amit Shah's Political Statement

Reacting to Union Home Minister Amit Shah's statement that Neha's murder in Hubballi was a case of love jihad,the CM said that Amit Shah has made a political statement. The accused was immediately arrested. A special court has been set up after handing over the case to the CID. He said that the Government will do its best to extend maximum punishment to the accused as per the law.

What action has Amit Shah taken in Manipur, who simply lies its Love Jihad , the CM asked.

To stay in power, BJP is doing what it shouldn't

BJP has no faith in constitution, democracy, reservation, unity and equality. He said that it is a habit of BJP to break the society by harassing of innocent people.

Key words: Central government, Prajwal Revanna, CM, Siddaramaiah

Tags :

.