HomeBreaking NewsLatest NewsPoliticsSportsCrimeCinema

ಸೆ.20 ರಂದು ಕೇಂದ್ರ ರೇಷ್ಮೆ ಮಂಡಳಿ ಅಮೃತ ಮಹೋತ್ಸವ ಕಾರ್ಯಕ್ರಮ

06:36 PM Sep 17, 2024 IST | prashanth

ಮೈಸೂರು,ಸೆಪ್ಟಂಬರ್,17,2024 (www.justkannada.in): ಕೇಂದ್ರ ರೇಷ್ಮೆ ಮಂಡಳಿ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸೆ.20ರಂದು ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವಕುವಾರ್ ತಿಳಿಸಿದರು.

ನಗರದ ಶ್ರೀರಾಂಪುರ ರಸ್ತೆಯಲ್ಲಿರುವ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಕೇಂದ್ರ ಭಾರಿ ಕೈಗಾರಿಕೆ, ಉಕ್ಕು ಸಚಿವ ಎಚ್.ಡಿ.ಕುವಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿದೇಶಾಂಗ ವ್ಯವಹಾರ, ಜವಳಿ ಖಾತೆ ರಾಜ್ಯ ಸಚಿವರಾದ ಪಬಿತ್ರಾ ವಾರ್ಗರೀಟಾ, ರೈಲ್ವೆ, ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್‌ಗೌಡ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಮೊದಲ ಸ್ಥಾನದ ಗುರಿ:

1948ರಲ್ಲಿ ಆರಂಭವಾದ ಕೇಂದ್ರ ರೇಷ್ಮೆ ಮಂಡಳಿಗೆ  ದೇಶಾದ್ಯಂತ 159 ಘಟಕಗಳಿದ್ದು, 9 ಸಂಶೋಧನಾ ಸಂಸ್ಥೆಗಳು ವಿವಿಧ ರಾಜ್ಯಗಳ ಲ್ಲಿ ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರದ 27 ರಾಜ್ಯಗಳಲ್ಲಿ ರೇಷ್ಮೆ ಉತ್ಪಾದನೆಯಾಗುತ್ತಿದ್ದು  ಪ್ರಸ್ತುತ ರೇಷ್ಮೆ ಉತ್ಪಾದನೆಲ್ಲಿ ಭಾರತ 2ನೇ ಸ್ಥಾನದಲ್ಲಿದೆ. 2023-24ರಲ್ಲಿ ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಭಾರತ ಶೇ.42ರಷ್ಟು ಪಾಲು ಹೊಂದಿದೆ. 2023-24ರಲ್ಲಿ 2028 ಕೋಟಿ ರೂ. ಮೌಲ್ಯದ ರೇಷ್ಮೆ ರಫ್ತು ಮಾಡಲಾಗಿದೆ. ೨.೬೩ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಬೆಳೆಯಲಾಗು ತ್ತಿದ್ದು, ಕಚ್ಚಾ ರೇಷ್ಮೆ ಪ್ರವಾಣವೂ ಏರಿಕೆಯಾಗಿದೆ. 2047ರ ವೇಳೆಗೆ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು.

Key words: Central Silk Board, Amrita Mahotsava, program ,20th September

Tags :
20th SeptemberAmrita MahotsavaCentral Silk Boardprogram.
Next Article