For the best experience, open
https://m.justkannada.in
on your mobile browser.

ಸಚಿವ ಸಂಪುಟದಿಂದ ಪ್ರಿಯಾಂಕ್ ಖರ್ಗೆ ವಜಾಗೊಳಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

01:59 PM Aug 27, 2024 IST | prashanth
ಸಚಿವ ಸಂಪುಟದಿಂದ ಪ್ರಿಯಾಂಕ್ ಖರ್ಗೆ ವಜಾಗೊಳಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು, ಆಗಸ್ಟ್​ 27,2024 (www.justkannada.in): ಸಚಿವ ಸಂಪುಟದಿಂದ  ಗ್ರಾಪ್ರಿಯಾಂಕ್ ಖರ್ಗೆ ವಜಾಗೊಳಿಸಲು ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ,  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ದೂರು ನೀಡುತ್ತೇವೆ. ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿಬೇಕು. 5 ಎಕರೆ ಜಮೀನು ವಾಪಸ್‌ ಪಡೆಯಬೇಕು. ಎಂದು ಒತ್ತಾಯಿಸಿದರು.

ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ ಒಂದು ಮನೆಗೆ ಸೀಮಿತವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಧಾಕೃಷ್ಣ ಎಂಬುವರ ಹೆಸರಿನಲ್ಲಿ ಟ್ರಸ್ಟ್​ ಇದೆ. ಕಲಬುರಗಿಯಲ್ಲಿ ಟ್ರಸ್ಟ್​​ ರಿಜಿಸ್ಟರ್ ಮಾಡಲಾಗಿದೆ. ದಲಿತರು ಅಂದರೆ ಒಂದೇ ಒಂದು ಕುಟುಂಬವಲ್ಲ. ಅನೇಕ ದಲಿತ ಕುಟುಂಬ ಕೂಡ ಇವೆ. ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ. ಅದು ಕೂಡ ಏರೋಸ್ಪೇಸ್ ಹೆಸರಲ್ಲಿ ತೆಗೆದುಕೊಂಡಿದ್ದಾರೆ. ಇದು ಮತ್ತೊಂದು ಮುಡಾ ಕೇಸ್ ಆಗಲಿದೆ. ಆ ಜಾಗ ಬೇಕು ಅಂತ‌ ಅನೇಕರು ಅರ್ಜಿ ಸಲ್ಲಿಸಿದ್ದಾರೆ. ಖರ್ಗೆ ಕುಟುಂಬ ಒಂದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬವಲ್ಲ. ಈ ಬಗ್ಗೆ ಸಂಪೂರ್ಣ ದಾಖಲೆ‌ ಇಟ್ಟು ಮಾತನಾಡುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

Key words: Chalawadi Narayanaswamy, dismissal, Priyank Kharge, Cabinet

Tags :

.