ಸಚಿವ ಸಂಪುಟದಿಂದ ಪ್ರಿಯಾಂಕ್ ಖರ್ಗೆ ವಜಾಗೊಳಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು, ಆಗಸ್ಟ್ 27,2024 (www.justkannada.in): ಸಚಿವ ಸಂಪುಟದಿಂದ ಗ್ರಾಪ್ರಿಯಾಂಕ್ ಖರ್ಗೆ ವಜಾಗೊಳಿಸಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ 5 ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಕುರಿತು ರಾಜ್ಯಪಾಲರಿಗೆ ದೂರು ನೀಡುತ್ತೇವೆ. ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿಬೇಕು. 5 ಎಕರೆ ಜಮೀನು ವಾಪಸ್ ಪಡೆಯಬೇಕು. ಎಂದು ಒತ್ತಾಯಿಸಿದರು.
ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಒಂದು ಮನೆಗೆ ಸೀಮಿತವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಧಾಕೃಷ್ಣ ಎಂಬುವರ ಹೆಸರಿನಲ್ಲಿ ಟ್ರಸ್ಟ್ ಇದೆ. ಕಲಬುರಗಿಯಲ್ಲಿ ಟ್ರಸ್ಟ್ ರಿಜಿಸ್ಟರ್ ಮಾಡಲಾಗಿದೆ. ದಲಿತರು ಅಂದರೆ ಒಂದೇ ಒಂದು ಕುಟುಂಬವಲ್ಲ. ಅನೇಕ ದಲಿತ ಕುಟುಂಬ ಕೂಡ ಇವೆ. ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ. ಅದು ಕೂಡ ಏರೋಸ್ಪೇಸ್ ಹೆಸರಲ್ಲಿ ತೆಗೆದುಕೊಂಡಿದ್ದಾರೆ. ಇದು ಮತ್ತೊಂದು ಮುಡಾ ಕೇಸ್ ಆಗಲಿದೆ. ಆ ಜಾಗ ಬೇಕು ಅಂತ ಅನೇಕರು ಅರ್ಜಿ ಸಲ್ಲಿಸಿದ್ದಾರೆ. ಖರ್ಗೆ ಕುಟುಂಬ ಒಂದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬವಲ್ಲ. ಈ ಬಗ್ಗೆ ಸಂಪೂರ್ಣ ದಾಖಲೆ ಇಟ್ಟು ಮಾತನಾಡುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
Key words: Chalawadi Narayanaswamy, dismissal, Priyank Kharge, Cabinet