ಜಾರ್ಖಾಂಡ್ ನೂತನ ಸಿಎಂ ಆಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ.
ರಾಂಚಿ,ಫೆಬ್ರವರಿ,2,2024(www.justkannada.in): ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ದ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೇಮಂತ್ ಸೊರೆನ್ ಅವರನ್ನ ಬಂಧಿಸಲಾಗಿದೆ. ಈ ಬಗ್ಗೆ ಈಗಾಗಲೇ ಇಡಿ ರಾಂಚಿಯಲ್ಲಿರುವಪಿಎಂಎಲ್‌ಎ ನ್ಯಾಯಾಲಯಕ್ಕೆ ಸಾಕ್ಷ್ಯಗಳನ್ನು ನೀಡಲಾಗಿದೆ. ಹೇಮಂತ್ ಸೊರೆನ್ ಅವರನ್ನು ತನಿಖೆ ನಡೆಸಬೇಕಾಗಿದೆ. ಈ ಕಾರಣಕ್ಕಾಗಿ 10 ದಿನಗಳ ನ್ಯಾಯಂಗ ಬಂಧನದಲ್ಲಿ ಇರಿಸಬೇಕು ಎಂದು ಇಡಿ ಕೋರ್ಟ್ಗೆ ಮನವಿ ಮಾಡಿತ್ತು. ಆದರೆ ಇದಕ್ಕೆ ಒಪ್ಪದ ಕೋರ್ಟ್ ಒಂದು ದಿನದ ಮಟ್ಟಿಗೆ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ.
ಈ ಹಿನ್ನೆಯಲ್ಲಿ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು ಇಂದು ಪ್ರಮಾಣ ವಚನ ಸ್ವೀಕರಿಸಿದರು.
Key words: Champai Soren- sworn - as -new CM - Jharkhand