For the best experience, open
https://m.justkannada.in
on your mobile browser.

ಆಂಧ್ರಪ್ರದೇಶದ ನೂತನ ಸಿಎಂ ಆಗಿ​ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

12:03 PM Jun 12, 2024 IST | prashanth
ಆಂಧ್ರಪ್ರದೇಶದ ನೂತನ ಸಿಎಂ ಆಗಿ​ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

ಆಂಧ್ರಪ್ರದೇಶ,ಜೂನ್,12,2024 (www.justkannada.in): ಆಂಧ್ರಪ್ರದೇಶದ  ನೂತನ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದರು.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ ನಲ್ಲಿ ಪ್ರಮಾಣವಚನ ಸಮಾರಂಭ ನಡೆದಿದ್ದು  ಆಂಧ್ರಪ್ರದೇಶದ  ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಅಧಿಕಾರ ಸ್ವೀಕರಿಸಿದರು. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ.

ಆಂಧ್ರಪ್ರದೇಶ ಸರ್ಕಾರದ ಸಚಿವರಾಗಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿ ಮುಖ್ಯಸ್ಥರ ಪುತ್ರ ನಾರಾ ಲೋಕೇಶ್ ಸೇರಿದಂತೆ 22 ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಸೇರಿ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.

ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ.

Key words: Chandrababu Naidu, new CM, Andhra Pradesh

Tags :

.