HomeBreaking NewsLatest NewsPoliticsSportsCrimeCinema

ಮಕ್ಕಳಿಂದ ಶೌಚಾಲಯ ಶುಚಿ ಪ್ರಕರಣ: ಶಾಲೆ-ಕಾಲೇಜು, ಹಾಸ್ಟೆಲ್‌ ಗಳಲ್ಲಿ ನಿಗಾ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ.

03:44 PM Dec 23, 2023 IST | prashanth

ಬೆಂಗಳೂರು,ಡಿಸೆಂಬರ್,23,2023(www.justkannada.in): ಬೆಂಗಳೂರಿನ ಶಾಲೆಯೊಂದರಲ್ಲಿ ಮಕ್ಕಳಿಂದಲೇ ಶೌಚಾಲಯ ಕ್ಲೀನಿಂಗ್ ಮಾಡಿಸಿದ ವಿಡಿಯೋ ವೈರ‍ಲ್ ಆಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೆ, ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಈ ಸಂಬಂಧ  ಶಾಲೆ-ಕಾಲೇಜು, ಹಾಸ್ಟೆಲ್‌ ಗಳಲ್ಲಿ ನಿಗಾ ವಹಿಸುವಂತೆ ಸಚಿವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ  ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ.

ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ ಗಳಲ್ಲಿಯೂ ಈ ಬಗ್ಗೆ ನಿಗಾ ವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದಿದ್ದಾರೆ.

ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ  ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: Children – school-cleaning –toilets-CM Siddaramaiah- instructs -minister

Tags :
Children – school-cleaning –toiletsCM Siddaramaiahinstructsminister
Next Article