For the best experience, open
https://m.justkannada.in
on your mobile browser.

ಲೋಕಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಸ್ಪಷ್ಟನೆ ಕೊಟ್ಟ ಡಾ. ಸಿ.ಎನ್ ಮಂಜುನಾಥ್.

05:35 PM Feb 21, 2024 IST | prashanth
ಲೋಕಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಸ್ಪಷ್ಟನೆ ಕೊಟ್ಟ ಡಾ  ಸಿ ಎನ್ ಮಂಜುನಾಥ್

ಮಂಡ್ಯ, ಫೆಬ್ರವರಿ,21,2024(www.justkannada.in):  ಖ್ಯಾತ ಹೃದ್ರೋಗ ತಜ್ಞ, ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಅಥವಾ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು ಈ ಕುರಿತು ಸ್ವತಃ ಡಾ. ಸಿ.ಎನ್ ಮಂಜುನಾಥ್ ಅವರೇ  ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಡಾ.ಸಿಎನ್ ಮಂಜುನಾಥ್, ನಾನು ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಜನರು ಮಾತಾಡುತ್ತಾ ಇದ್ದಾರೆ. ಆದರೆ, ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು  ಸ್ಪಷ್ಟನೆ ನೀಡಿದ್ದಾರೆ.

ಹಲವು ಕಡೆಗಳಲ್ಲಿ ಚುನಾವಣೆಗೆ ನಿಲ್ಲುವಂತೆ ಜನರು ಒತ್ತಡ ಹಾಕುತ್ತಿದ್ದಾರೆ. ರಾಜಕೀಯಕ್ಕೆ ಬರಬೇಕಾ? ಲೋಕಸಭಾ ಚುನಾವಣೆಗೆ ನಿಲ್ಲಬೇಕಾ ಬೇಡವೇ ಎಂಬ ಬಗ್ಗೆ ಗೊಂದಲಗಳಿವೆ. ಲೋಕಸಭೆ ಪ್ರವೇಶ ಕೇವಲ ರಾಜಕೀಯ ಮೂಲಕವೇ ಅಲ್ಲ. ರಾಜಕೀಯವೇ ಬೇರೆ, ಲೋಕಸಭೆಯೇ ಬೇರೆ. ಸದ್ಯ ಆಲೋಚನೆ ಮಾಡುತ್ತಿದ್ದೇನೆ. ಮುಂದೆ ಈ ಬಗ್ಗೆ ಸ್ಪಷ್ಟ ನಿರ್ಧಾರ ತಿಳಿಸುತ್ತೇನೆ ಎಂದು  ಡಾ. ಮಂಜುನಾಥ್ ಅವರು ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿ ಹೃದ್ರೋಗ ಚಿಕಿತ್ಸಾ ಕೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೀರಾ. ಇದೇ ರೀತಿ ರಾಷ್ಟ್ರ ಮಟ್ಟದಲ್ಲೂ ಈ ರೀತಿಯ ಸುಧಾರಣೆ ಯಾಕೆ ತರಬಾರದು ಎಂದು ಹೇಳುತ್ತಿದ್ದಾರೆ. ಮುಂದೆ ಸ್ಪರ್ಧೆಯ ಬಗ್ಗೆ ತೀರ್ಮಾನ ಮಾಡಿದರೆ ಹೇಳುತ್ತೇನೆ ಎಂದರು.

Key words: clarification - competition - Lok Sabha elections- Dr. CN Manjunath.

Tags :

.