HomeBreaking NewsLatest NewsPoliticsSportsCrimeCinema

ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್: ರಾಜಕಾಲುವೆ ಪರಿಶೀಲನೆ.

12:44 PM May 22, 2024 IST | prashanth

ಬೆಂಗಳೂರು,ಮೇ,22,2024 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ಸಿಟಿ ರೌಂಡ್ಸ್‌ ಕೈಗೊಂಡಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ  ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ  ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ರಾಮಲಿಂಗ ರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೇರಿ ಹಲವರು ಸಾಥ್‌ ನೀಡಿದ್ದಾರೆ. ಮೊದಲಿಗೆ  ಸಿಎಂ ಸಿದ್ದರಾಮಯ್ಯ ಅವರು ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ರಾಜಕಾಲುವೆ ಪರಿಶೀಲನೆ ನಡೆಸಿದಿದ್ದಾರೆ.

ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ, ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11. 5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು. ಸಮಸ್ಯೆ ಬಗೆಹರಿಸಲು ಕೊಟ್ಟ ಕಾಲ ಮಿತಿ ಮಳೆಗಾಲದೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಹಾಗೆಯೇ ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದೊದ್ದರೆ ಸಸ್ಪೆಂಡ್ ಆಗ್ತೀರ ಎಂದು ಚೀಫ್ ಎಂಜಿನಿಯರ್ ಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಇದಾದ ಬಳಿಕ ನಾಯಂಡಹಳ್ಳಿ ಜಂಕ್ಷನ್‌, ರಾಜಕಾಲುವೆ ಹೂಳು ತೆರವು ಪರಿಶೀಲನೆ, ಜೆ.ಪಿ.ನಗರದ ರಾಗಿಗುಡ್ಡ ಜಂಕ್ಷನ್‌ ವೀಕ್ಷಣೆ, ಅನುಗ್ರಹ ಲೇಔಟ್‌ ನ ರಾಜಕಾಲುವೆ ಕಾಮಗಾರಿ, ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನ ರಾಜ ಕಾಲುವೆ ಕಾಮಗಾರಿ, ಯೆಮಲೂರು ಬಳಿಕ ರಾಜಕಾಲುವೆ ಕಾಮಗಾರಿಯನ್ನ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಲಿದ್ದಾರೆ.

Key words: CM, Siddaramaiah, Bangalore, City Rounds

Tags :
Bangalorecity.roundsCM Siddaramaiah
Next Article