ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್
ಬೆಂಗಳೂರು,ಆಗಸ್ಟ್,1,2024 (www.justkannada.in): ಮುಡಾ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ, ದೆಹಲಿಯಿಂದ ವಾಪಾಸ್ ಆಗಿದ್ದು, ಇಂದು ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದಾರೆ.
ಕಾವೇರಿ ನಿವಾಸದಲ್ಲಿ ಎಲ್ಲಾ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಉಪಹಾರ ಕೂಟ ಆಯೋಜಿಸಿದ್ದು, ಸಿಎಂ ನಡೆ ತೀವ್ರ ಕುತೂಹಲ ಮೂಡಿಸಿದೆ. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್, ಸಂತೋಷ್ ಲಾಡ್, ಬೋಸರಾಜು, ಎಂ, ಬಿ ಪಾಟೀಲ್, ಕೆಎನ್ ರಾಜಣ್ಣ, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಹೆಚ್.ಕೆ ಪಾಟೀಲ್ ಶಿವರಾಜ್ ತಂಗಡಗಿ, ರಹೀಂಖಾನ್ ಚಲುವರಾಯಸ್ವಾಮಿ ಸೇರಿ ಎಲ್ಲಾ ಸಚಿವರು ಭಾಗಿಯಾಗಿದ್ದಾರೆ.
ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ನೋಟಿಸ್ ನೀಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದ್ದು ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
Key words: CM Siddaramaiah, breakfast, meeting, ministers