For the best experience, open
https://m.justkannada.in
on your mobile browser.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ.

02:57 PM Feb 14, 2024 IST | prashanth
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,14,2024(www.justkannada.in): ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ  ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದ್ದ ಆದೇಶವನ್ನ ಪ್ರಶ್ನಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ  ಸುಪ್ರೀಂ ಕೋರ್ಟ್ ​ಮೆಟ್ಟಿಲೇರಿದ್ದಾರೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ ನ ನಾಯಕರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸಾವರರು ಪರದಾಡುವಂತಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್​ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರಿಗೆ ದಂಡ ವಿಧಿಸಿ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.

ಈ ಆದೇಶವನ್ನ ಪ್ರಶ್ನಿಸಿ ಇದೀಗ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಗೆ  ಮೆಟ್ಟಿಲೇರಿದ್ದು ನಮ್ಮ ಪ್ರತಿಭಟನೆ ಕಾನೂನು ಬದ್ಧವಾಗಿತ್ತು ಎಂದು ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Key words: CM Siddaramaiah -challenged -High Court -order - moved - Supreme Court.

Tags :

.