ಚಿಕ್ಕಬಳ್ಳಾಪುರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ.
01:02 PM Oct 26, 2023 IST
|
prashanth
ಬೆಂಗಳೂರು,ಅಕ್ಟೋಬರ್,26,2023(www.justkannada.in): ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಿಂತಿದ್ದ ಲಾರಿಗೆ ಟಾಟಾಸುಮೊ ಡಿಕ್ಕಿಯಾಗಿ 12 ಮಂದಿ ಮೃತಪಟ್ಟಿದ್ದರು. ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ಆದರೆ, ಬೆಳಿಗ್ಗೆ ದಟ್ಟ ಮಂಜು ಇದ್ದ ಕಾರಣ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಹೀಗಾಗಿ ಅಪಘಾತ ಸಂಭವಿಸಿತ್ತು.
ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಸಿಎಂ ಸಿದ್ಧರಾಮಯ್ಯ ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Key words: CM Siddaramaiah - compensation - Rs 2 lakh - Chikkaballapur –accident- families
Next Article