For the best experience, open
https://m.justkannada.in
on your mobile browser.

ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

05:25 PM Aug 21, 2024 IST | prashanth
ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ  ಡಿಸಿಎಂ ಡಿಕೆ ಶಿವಕುಮಾರ್

ವಿಜಯಪುರ, ಆಗಸ್ಟ್, 21,2024 (www.justkannada.in): ಈ ಬಾರಿ ಉತ್ತಮ ಮಳೆಯಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಈ ಮಧ್ಯೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ  ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿ ನಂತರ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಬಾಗಿನ ಅರ್ಪಿಸಿದರು.

ಈ ವೇಳೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಸಚಿವರಾದ ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.

Key words: CM Siddaramaiah, DCM DK Shivakumar, Alamati reservoir

Tags :

.