HomeBreaking NewsLatest NewsPoliticsSportsCrimeCinema

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್ .

10:30 AM Jun 01, 2024 IST | prashanth

ಬೆಂಗಳೂರು,ಜೂನ್,1,2024 (www.justkannada.in): ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ.

ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಭ್ರಷ್ಟಾಚಾರ ದರಪಟ್ಟಿ ಜಾಹೀರಾತು ಬಿಡುಗಡೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ    ಬಿಜೆಪಿ ಮುಖಂಡ ಕೇಶವ್ ಪ್ರಸಾದ್  ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಖುದ್ದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಮೂವರು ನಾಯಕರಿಗೆ ಕೋರ್ಟ್ ನೋಟಿಸ್ ನೀಡಿದ್ದು ,ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್ ಕೋರ್ಟ್ ಗೆ ಹಾಜರಾಗಲಿದ್ದಾರೆ.

ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೂಡ ವಿಚಾರಣೆಯಿಂದ ವಿನಾಯಿತಿ ಕೇಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಕಳೆದ ಬಾರಿಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದಿನ ಹಾಜರಾತಿಯಿಂದ ರಾಹುಲ್ ಗಾಂಧಿ ವಿನಾಯಿತಿ ಕೇಳುವ ಸಾಧ್ಯತೆ ಇದೆ.

Key words: CM, Siddaramaiah, DCM, DK Shivakumar, court

Tags :
CM- Siddaramaiah- DCM -DK Shivakumar - court
Next Article