HomeBreaking NewsLatest NewsPoliticsSportsCrimeCinema

ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್.

12:41 PM May 27, 2024 IST | prashanth

ಬೆಂಗಳೂರು,ಮೇ,27,2024 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ನಾಳೆ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ವಿಧಾನಪರಿಷತ್  ಚುನಾವಣೆ ನಡೆಯಲಿದ್ದು ಪರಿಷತ್ ನ  7 ಸ್ಥಾನಗಳಿಗೆ 70 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ.   ಈ ಹಿನ್ನೆಲೆಯಲ್ಲಿ ವಿಧಾನಪರಿಷತ್  ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ನಾಯಕರ ಜೊತೆ ಇಬ್ಬರು ನಾಯಕರು ಚರ್ಚೆ ನಡೆಸಲಿದ್ದಾರೆ.

Key words: CM, Siddaramaiah, DCM, DK Shivakumar, Delhi

Tags :
CM Siddaramaiah- DCM -DK ShivakumarDelhi
Next Article