HomeBreaking NewsLatest NewsPoliticsSportsCrimeCinema

SSLC ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ.

03:28 PM May 17, 2024 IST | prashanth

ಬೆಂಗಳೂರು, ಮೇ, 17,2024 (www.justkannada.in):  ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ (ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ  ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.  ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು.

ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗಲ್ವಾ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಿವಕುಮಾರ್​ ಮಾತಿಗೆ ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.

Key words: CM –Siddaramaiah- instructs - cancel -SSLC grace marks

Tags :
CM –Siddaramaiah- instructs - cancel -SSLC grace marks
Next Article