For the best experience, open
https://m.justkannada.in
on your mobile browser.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದರೇ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ- ಸಿಎಂ ಸಿದ್ದರಾಮಯ್ಯ

05:09 PM Aug 20, 2024 IST | prashanth
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದರೇ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ  ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್,20,2024 (www.justkannada.in):  ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಕ್ಕರೇ  ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುತ್ತೇವೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜನ್ಮದಿನಾಚಾರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ವಿಧಾನ ಪರಿಷತ್ ನಲ್ಲಿ ಬಹುಮತ ಬರಲಿ ಅಂತ ಕಾಯುತ್ತಿದ್ದೇನೆ. ಬಹುಮತ ಸಿಕ್ಕರೆ  ಬಿಜೆಪಿಯವರ ತಿದ್ದುಪಡಿಯನ್ನು ಬದಲಾವಣೆ ಮಾಡುತ್ತೇನೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುತ್ತೇವೆ ಎಂದರು.

ದೇವರಾಜ ಅರಸು ಅವರು 1972 ರಿಂದ ದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗ ರಚನೆ ಮಾಡಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು. ಹಾವನೂರು ಆಯೋಗಕ್ಕೆ ಭಾರಿ ವಿರೋಧವಿದ್ದರೂ ದೇವರಾಜ ಅರಸು ಅದನ್ನು ಜಾರಿಗೆ ತಂದರು. ಉಳುವವನೇ ಭೂಮಿಯ ಒಡೆಯ ಅಂತ ದೇವರಾಜ ಅರಸು ಮಾಡಿದ್ದರು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನಸೌಧ ಪ್ರವೇಶಿಸುವಂತೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದರು.

Key words: CM Siddaramaiah, Land Reforms Act, Congress, majority

Tags :

.