For the best experience, open
https://m.justkannada.in
on your mobile browser.

5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ  ಸಿಎಂ ಸಿದ್ದರಾಮಯ್ಯ.

01:21 PM Dec 26, 2023 IST | prashanth
5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ  ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಡಿಸೆಂಬರ್,26,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ   ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ನಡೆದ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ,  ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಉಪಸ್ಥಿತರಿದ್ದರು.

ಈ ಯೋಜನೆಯಡಿ ಪದವೀಧರರಿಗೆ 3000, ಡಿಪ್ಲೋಮಾ ಪದವೀಧರರಿಗೆ 1500 ರೂ ಮಾಸಿಕ ಭತ್ಯೆ ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಪದವೀಧರರಿಗೆ ಈ ಅವಕಾಶವಿದ್ದು, ಸೇವಾಸಿಂಧು, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎರಡು ವರ್ಷಗಳ ಕಾಲ ರಾಜ್ಯ ಸರ್ಕಾರ ಯುವನಿಧಿ ಭತ್ಯೆ ನೀಡಲಿದೆ. ಕೆಲಸ ಸಿಕ್ಕ ತಕ್ಷಣ ಯುವನಿಧಿ ಯೋಜನೆ ಹಣ ಸ್ಥಗಿತಗೊಳ್ಳಲಿದೆ.

Key words: CM Siddaramaiah -launched - 5th Guarantee –yuvanidhi- Scheme- registration

Tags :

.