ಇಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ಧರಾಮಯ್ಯ.
10:12 AM Oct 31, 2023 IST
|
prashanth
ಮಂಡ್ಯ, ಅಕ್ಟೋಬರ್,31,2023(www.justkannada.in): ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಂಡ್ಯಗೆ ಭೇಟಿ ನೀಡಲಿದ್ದಾರೆ.
ಮಂಡ್ಯ ನಗರದ ಖಾಸಗಿ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆಯುತ್ತಿರುವ ಪತ್ರಕರ್ತರ ಅಂತರ್ ಜಿಲ್ಲಾ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಮ್ಮೇಳನವನ್ನ ಉದ್ಘಾಟಿಸಲಿದ್ದಾರೆ.
ಬಳಿಕ ಮಂಡ್ಯ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ರುವ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳ ಜತೆ ಚರ್ಚಿಸಿಲಿದ್ದಾರೆ. ನಂತರ 6ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
Key words: CM Siddaramaiah -Mandya -district -today.
Next Article