ವೈಮನಸ್ಸು ಮರೆತು ಭೇಟಿಯಾದ ಹಳೇ ದೋಸ್ತಿಗಳು: ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಮೈಸೂರು,ಏಪ್ರಿಲ್,13,2024 (www.justkannada.in): ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದ್ದು, ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೇ ದೋಸ್ತಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿದ್ದಾರೆ.
ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ದೂರ ಉಳಿದಿದ್ದರು. ಇದೀಗ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ. ಶ್ರೀನಿವಾಸ್ ಪ್ರಸಾದ್ ಮನೆಗೆ ನಾನು ಹೋಗಲ್ಲ ಅಂತ ಸಿಎಂ ಸಿದ್ದರಾಮಯ್ಯ ವಾರದ ಹಿಂದೆ ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಒಂದೇ ವಾರದಲ್ಲಿ ನಿಲುವು ಬದಲಾಯಿಸಿಕೊಂಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಮನೆಗೆ ಹೋಗದಿದ್ದರೆ ದುಬಾರಿ ಬೆಲೆ ತೆತ್ತಬೇಕಾಗುತ್ತೆ ಎಂಬ ಸುಳಿವು ಸಿಕ್ಕಿದ್ದೆ ತಡ ಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡದಿದ್ದರೆ ಆಗುವ ನಷ್ಟದ ಬಗ್ಗೆ ನಿನ್ನೆ ರಾತ್ರಿ ಸ್ಥಳೀಯ ನಾಯಕರು ವಿವರಣೆ ಕೊಟ್ಟಿದ್ದರು. ಈ ಕಾರಣದಿಂದಲೇ ಶ್ರೀನಿವಾಸ್ ಪ್ರಸಾದ್ ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀವು ಕಾಂಗ್ರೆಸ್ ನಲ್ಲಿ ಇದ್ದವರು ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ ಎಂದು ಹೇಳಿದ್ದೇನೆ. ಸುಧೀರ್ಘವಾಗಿ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ. ಅವರು ರಾಜಕೀಯವಾಗಿ ನಿವೃತ್ತಿ ತೆಗೆದುಕೊಂಡಿದ್ದಾರೆ. ಹೀಗಾಗಿ ರಾಜಕೀಯದ ಬಗ್ಗೆ ಹೆಚ್ಚು ಏನು ಮಾತನಾಡಿಲ್ಲ ಅವರ ಬಳಿ. ಅವರು ನಮ್ಮ ಹಳೆಯ ಸ್ನೇಹಿತರು. ರಾಜಕೀಯವಾಗಿ ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೆ ಎಂದರು.
Key words: CM Siddaramaiah, meet, Shrinivas Prasad