For the best experience, open
https://m.justkannada.in
on your mobile browser.

ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ

02:17 PM Sep 02, 2024 IST | prashanth
ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಮೈಸೂರು, ಸೆಪ್ಟಂಬರ್, 1,2024 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಾಗೂ ನಾಳೆ ಮೈಸೂರು ಪ್ರವಾಸದಲ್ಲಿರಲಿದ್ದಾರೆ.

ಇಂದು ರಾತ್ರಿ 7.25 ಕ್ಕೆ  ಮೈಸೂರು ನಗರಕ್ಕಾಗಮಿಸುವ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ. ಸೆಪ್ಟೆಂಬರ್ 3 ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ನಂತರ ಬೆಳಿಗ್ಗೆ 10,30ಕ್ಕೆ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ನಡೆಯಲಿರುವ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM, Siddaramaiah, Mysore, today

Tags :

.