ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ.
02:13 PM Jan 12, 2024 IST
|
prashanth
ಶಿವಮೊಗ್ಗ,ಜನವರಿ,12,2024(www.justkannada.in): ಸರ್ಕಾರದ 5ನೇ ಗ್ಯಾರಂಟಿ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.
ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಇದೀಗ ಯುವನಿಧಿ ಯೋಜನೆಗೆ 'ಸಿಎಂ ಸಿದ್ದರಾಮಯ್ಯ' ಚಾಲನೆ ನೀಡಿದರು.
ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು , ಡಿಸಿಎಂ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವ ಕೆಜೆ ಜಾರ್ಜ್ ಉಪಸ್ಥಿತರಿದ್ದರು.
ಯೋಜನೆಯಡಿ ಪದವೀದಧರರಿಗೆ ರೂ. 3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುತ್ತದೆ.
Key words: CM Siddaramaiah -officially -launched – yuvanidhi Scheme