ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ, ಪರಿಶೀಲನೆ: ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಆಗಸ್ಟ್ 5, 2024(www.justkannada.in): ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭೇಟಿ ನೀಡಿ ಪರಿಶೀಲಿಸಿದರು.
ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಸಂಸದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
ಇದಾದ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ ಉಂಟಾಗಿರುವ ಹಾನಿಯನ್ನು ವಿವರಿಸಿದರು. ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸಿದರು.
ಕಾಳಜಿ ಕೇಂದ್ರಕ್ಕೆ ಭೇಟಿ
ಮುಳಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ ನಗರದ ಸರಕಾರಿ ಮುನ್ಸಿಪಲ್ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ ಜತೆ ಚರ್ಚಿಸಿದರು.
ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಸಂತ್ರಸ್ತ ಕುಟುಂಬದವರು ಸಮಾಧಾನ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ENGLISH SUMMARY..
Gokaka: CM visits flood affected areas
Chief Minister Siddaramaiah heard the statement of the victims at the care center
Belgaum, Aug. 5 (Karnataka News): Chief Minister Siddaramaiah on Monday visited and inspected the various areas of Gokak affected by heavy rains and floods and the care center.
He arrived at Sambra airport in Belgaum by special flight and reached Gokak city by road.
He watched the Lolasur bridge which was submerged by the flood in Ghatprabha river which was overflowing due to heavy rains.
On this occasion, MLA Balachandra Jarakiholi appealed for the construction of a new bridge.
MP Priyanka Jarakiholi, Legislative Council member Lakhan Jarakiholi and others were present.
After this, he visited the old cattle town, Mutton Market, Kumbargalli, Upparagalli, Bhojagara Galli and other areas of Gokak, which had been inundated by backwater for a week, near Lolasura Bridge and inspected the damage.
Satish Jarakiholi, the district in-charge minister, explained the damage caused by the rain.
The Lolasura Bridge on the Sankeshwar-Yaragatti State Highway is very old and is causing serious trouble to the public as it gets submerged every year during the rainy season. Therefore, Minister Satish Jarakiholi explained to the Chief Minister that there is a need to build a higher Lolasur Bridge.
Visit to the care center
Chief Minister Siddaramaiah visited the care center that has been started at Government Municipal College in Gokak to provide shelter to the families whose houses were submerged due to flood and interacted with the victims
The affected families expressed relief that immediately after the water entered the houses, the authorities shifted us to the care center and made all kinds of arrangements.
The Chief Minister instructed the officials to provide food and necessary medical facilities to the victims.
Belagavi District In-charge Minister Satish Jarakiholi, Minister of Public Works Department, Women and Child Development Department Lakshmi Hebbalkar, Chief Secretary Shalini Rajneesh and other senior officials were present.
Key words: CM Siddaramaiah, Visit, flood, affected, places