HomeBreaking NewsLatest NewsPoliticsSportsCrimeCinema

ಒಕ್ಕಲಿಗ ಸಮುದಾಯ ಆಯ್ತು. ಈಗ ವೀರಶೈವ ಲಿಂಗಾಯತರಿಗೆ ಸಿಎಂ ಸ್ಥಾನಕ್ಕೆ ಆಗ್ರಹ

02:03 PM Jun 28, 2024 IST | prashanth

ಚಿಕ್ಕೋಡಿ, ಜೂನ್ 28,2024 (www.justkannada.in): ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಮನವಿ ಮಾಡಿದ ಬೆನ್ನಲ್ಲೆ ಇದೀಗ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂಬ ಕೂಗು ಎದ್ದಿದೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ. ವೀರಶೈವ ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡಿ  ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಚುನಾವಣೆಯಲ್ಲಿ ಲಿಂಗಾಯತರು ಬೆಂಬಲಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಲಿಂಗಾಯತರನ್ನ ಕಡೆಗಣಿಸಿದರೆ ಸರಿಯಲ್ಲ. ಎಂಬಿ ಪಾಟೀಲ್,  ಈಶ್ವರ್ ಖಂಡ್ರೆ, ಶಾಮನೂರು ಶಿವಶಂಕರಪ್ಪನವರಿಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Key words: CM, Veerashaiva Lingayats, Shivacharya Swamiji

Tags :
chanceCMShivacharya SwamijiVeerashaiva Lingayats
Next Article