For the best experience, open
https://m.justkannada.in
on your mobile browser.

ಮುಡಾ ಹಗರಣದ ಬಗ್ಗೆ ತನಿಖೆಗೆ ಆಯೋಗ ರಚನೆ: ತಡೆಯಾಜ್ಞೆ ನೀಡಬಾರದು- ವಕೀಲ ಕೆಜಿ ರಾಘವನ್ ವಾದ

03:30 PM Sep 02, 2024 IST | prashanth
ಮುಡಾ ಹಗರಣದ ಬಗ್ಗೆ ತನಿಖೆಗೆ ಆಯೋಗ ರಚನೆ  ತಡೆಯಾಜ್ಞೆ ನೀಡಬಾರದು  ವಕೀಲ ಕೆಜಿ ರಾಘವನ್ ವಾದ

ಬೆಂಗಳೂರು,ಸೆಪ್ಟಂಬರ್ ,2,2024 (www.justkannada.in):  ಮುಡಾ ಹಗರಣದ ಬಗ್ಗೆ ತನಿಖೆಗೆ ಸರ್ಕಾರ ಆಯೋಗವನ್ನೇ ರಚನೆ ಮಾಡಿದೆ. ಹೀಗಾಗಿ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ಹೈಕೋರ್ಟ್ ನಲ್ಲಿ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್ ವಾದ ಮಂಡಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆಯುತ್ತಿದೆ.

ದೂರುದಾರ  ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ ರಾಘವನ್, ವೈಯಕ್ತಿಕ ಪ್ರಭಾವ ಬಳಸಿದರೂ ಅದು ಸೆಕ್ಷನ್ 7ರಡಿ ಅಪರಾಧ.   ಸಾರ್ವಜನಿಕ ಆಡಳಿತದಲ್ಲಿ ಪಾವಿತ್ರತೆ ತರಲು ಕಾಯ್ದೆ ರಚಿಸಲಾಗಿದೆ. ಸಾರ್ವನಿಕರಲ್ಲಿ ಶುದ್ಧ ಆಡಳಿತದಲ್ಲಿ ನಂಬಿಕೆ ಇರಬೇಕು. ಇದು ಇಬ್ಬರ ನಡುವಿನ ವಿವಾದದ ವಿಷಯವಲ್ಲ.  ಸಾರ್ವಜನಕ ಹಿತಾಸಕ್ತಿಗೆ ಸಂಬಂಧಿಸಿದ್ದು ಎಂದಿದ್ದಾರೆ.

ಮುಡಾ ಹಗರಣದ ಬಗ್ಗೆ ತನಿಖೆಗೆ ಆಯೋಗ ರಚನೆ ಮಾಡಲಾಗಿದೆ. ಹೀಗಾಗಿ 17ಎ ಅಡಿ  ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು  ಸರಿ ಇದೆ. ಈ ಹಂತದಲ್ಲಿ ತನಿಖೆಗೆ ತಡೆಯಾಜ್ಞೆ ನೀಡಬಾರದು.  ಸತ್ಯ ಅನಾವರಣಗೊಳ್ಳಲು ಅವಕಾಶ ನೀಡಬೇಕು ಎಂದು ಹಿರಿಯ ವಕೀಲ ಕೆ.ಜಿ ರಾಘವನ್ ವಾದಿಸಿದರು.

Key words: commission, investigate, Muda scam, high court, KG Raghavan

Tags :

.