For the best experience, open
https://m.justkannada.in
on your mobile browser.

ಬಿಜೆಪಿ ವಿರುದ್ದ ಕಮಿಷನ್ ಆರೋಪ ಕೇಸ್: ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು.

12:22 PM Jun 07, 2024 IST | prashanth
ಬಿಜೆಪಿ ವಿರುದ್ದ ಕಮಿಷನ್ ಆರೋಪ ಕೇಸ್  ರಾಹುಲ್ ಗಾಂಧಿಗೆ ಷರತ್ತು ಬದ್ದ ಜಾಮೀನು

ಬೆಂಗಳೂರು,ಜೂನ್,7,2024 (www.justkannada.in): ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ  ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.

ಪ್ರಕರಣ ಸಂಬಂಧ ಇಂದು ರಾಹುಲ್ ಗಾಂಧಿ ವಿಚಾರಣೆಗೆ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್​ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನ್ಯಾಯಾಲಯದಲ್ಲಿ ಹಾಜರಿದ್ದರು.

Key words: Conditional, bail, Rahul Gandhi, court

Tags :

.