ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಉದಯನಿಧಿ ಸ್ಟಾಲಿನ್ ಗೆ ಷರತ್ತುಬದ್ಧ ಜಾಮೀನು
ಬೆಂಗಳೂರು, ಜೂನ್, 25,2024 (www.justkannada.in): ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಉದಯನಿಧಿ ಸ್ಟಾಲಿನ್ ಗೆ 42ನೇ ಎಸಿಎಂಎಂ ನ್ಯಾಯಾಲಯ 1 ಲಕ್ಷ ಬಾಂಡ್ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ಉದಯನಿಧಿ ಸ್ಟಾಲಿನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಇಂದು ಉದಯನಿಧಿ ಸ್ಟಾಲಿನ್ ನ್ಯಾಯಾಲಯಕ್ಕೆ ಹಾಜಾರಾಗಿದ್ದರು. ಈ ವೇಳೆ ನ್ಯಾಯಾಲಯ ಪ್ರಕರಣದ ಉಳಿದ ಆರೋಪಿಗಳು ಎಲ್ಲಿ ಎಂದು ನ್ಯಾಯಾಧೀಶರ ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಉದಯನಿಧಿ ಸ್ಟಾಲಿನ್ ಪರ ಹಿರಿಯ ವಕೀಲ ವಿಲ್ಸನ್, ಉದಯನಿಧಿ ಸ್ಟಾಲಿನ್ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು. ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿವೆ. ಸ್ಟಾಲಿನ್ ಅವರು ಒಂದು ರಾಜ್ಯದ ಕ್ರೀಡಾ ಸಚಿವ. ಹೀಗಾಗಿ, ಅವರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದರು.
ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು. ಇದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶ ಪ್ರತಿ ಸಲ್ಲಿಕೆ ಮಾಡುವಂತೆ ಸೂಚಿಸಿತು.
Key words: Conditional -bail - Udayanidhi Stalin