HomeBreaking NewsLatest NewsPoliticsSportsCrimeCinema

ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ : ಉದಯನಿಧಿ ಸ್ಟಾಲಿನ್ ಗೆ ಷರತ್ತುಬದ್ಧ ಜಾಮೀನು

02:57 PM Jun 25, 2024 IST | prashanth

ಬೆಂಗಳೂರು, ಜೂನ್​, 25,2024 (www.justkannada.in):  ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಗೆ ​​ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಉದಯನಿಧಿ ಸ್ಟಾಲಿನ್ ಗೆ 42ನೇ ಎಸಿಎಂಎಂ ನ್ಯಾಯಾಲಯ 1  ಲಕ್ಷ ಬಾಂಡ್​ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಉದಯನಿಧಿ ಸ್ಟಾಲಿನ್​ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್​ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್​ ಜಾರಿ ಮಾಡಿತ್ತು. ಇಂದು ಉದಯನಿಧಿ ಸ್ಟಾಲಿನ್​ ನ್ಯಾಯಾಲಯಕ್ಕೆ ಹಾಜಾರಾಗಿದ್ದರು. ಈ ವೇಳೆ ನ್ಯಾಯಾಲಯ ಪ್ರಕರಣದ ಉಳಿದ ಆರೋಪಿಗಳು ಎಲ್ಲಿ ಎಂದು ನ್ಯಾಯಾಧೀಶರ ಪ್ರಶ್ನೆ ಮಾಡಿದರು.


ಇದಕ್ಕೆ ಉತ್ತರಿಸಿದ ಉದಯನಿಧಿ ಸ್ಟಾಲಿನ್​ ಪರ ಹಿರಿಯ ವಕೀಲ ವಿಲ್ಸನ್, ಉದಯನಿಧಿ ಸ್ಟಾಲಿನ್​ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ‌ ನೀಡಬೇಕು. ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿವೆ. ಸ್ಟಾಲಿನ್​​ ಅವರು ಒಂದು ರಾಜ್ಯದ ಕ್ರೀಡಾ ಸಚಿವ. ಹೀಗಾಗಿ, ಅವರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ‌ ನೀಡಬೇಕು ಎಂದು ಮನವಿ ಮಾಡಿದರು.

ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್​ 8ಕ್ಕೆ ಮುಂದೂಡಿತು. ಇದರ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶ ಪ್ರತಿ ಸಲ್ಲಿಕೆ ಮಾಡುವಂತೆ ಸೂಚಿಸಿತು.

Key words:   Conditional -bail - Udayanidhi Stalin

Tags :
bailConditionalUdayanidhi Stalin.
Next Article