HomeBreaking NewsLatest NewsPoliticsSportsCrimeCinema

ಕೃಷಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರ ಕೊಡುಗೆ ಏನು..? ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ.

02:37 PM Apr 10, 2024 IST | prashanth

ಬೆಂಗಳೂರು,ಏಪ್ರಿಲ್,10,2024 (www.justkannada.in):  ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೇ ನಾನು ಕೃಷಿ ಸಚಿವನಾಗುವೆ ಎಂದಿದ್ದಕ್ಕೆ ಟೀಕಿಸಿದ್ದ ಕಾಂಗ್ರೆಸ್  ನಾಯಕರಿಗೆ ಮಾಜಿ ಸಿಎಂ ಹಾಗೂ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಕೃಷಿ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ  ಮಹಾದಾಯಿ ಯೋಜನೆಯನ್ನು ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ಕೊಟ್ಟಿತ್ತು.  ತುಂಗಭದ್ರ ಮೇಲ್ದಂಡೆ ಯೋಜನೆ ಶುರುಮಾಡಿದ್ದ್ದು ತಾನು ಮತ್ತು ಬಿಎಸ್ ಯಡಿಯೂರಪ್ಪ. ಹೀಗಾಗಿ  ಕಾಂಗ್ರೆಸ್ ನಾಯಕರು ಕೃಷಿ ಮತ್ತು ಕೃಷಿಕರ ಬಗ್ಗೆ ಹಗುರವಾಗಿ ಮಾತಾಡುವುದನ್ನು ನಿಲ್ಲಿಸಬೇಕು ಎಂದು ಕಿಡಿಕಾರಿದರು.

ಕಾಂಗ್ರೆಸ್ 25 ಗ್ಯಾರಂಟಿ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಈಗ ಕೊಟ್ಟಿರೋ ಗ್ಯಾರಂಟಿ ತಡೆದುಕೊಳ್ಳಲು ಆಗುತ್ತಿಲ್ಲ. ಇನ್ನೊಂದು 25 ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಸರಿಯಾಗಿ ಆರ್ಥಿಕ ನಿರ್ವಹಣೆ ಮಾಡುತ್ತಿಲ್ಲ.  ಕೇಂದ್ರ ಸರ್ಕಾರದತ್ತ ಕಾಂಗ್ರೆಸ್ ಬೊಟ್ಟು ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

Key words: Congress, agriculture, HDK

Tags :
contribution -Congress - agriculture - Former CM -HDK
Next Article