HomeBreaking NewsLatest NewsPoliticsSportsCrimeCinema

ವಿಧಾನಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಕಾಂಗ್ರೆಸ್.

05:36 PM May 23, 2024 IST | prashanth

ಬೆಂಗಳೂರು,ಮೇ,23,2024 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ ಕುಮಾರ್, ಬೆಂಗಳೂರು ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಫರ್ನಾಂಡಿಸ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ, ಬೆಂಗಳೂರಿನ ವಿನೋದ್ ಶಿವರಾಜ್ ಅವರನ್ನು ಉಚ್ಛಾಟಿಸಿ ಆದೇಶಿಸಿದ್ದಾರೆ.

ಈ ಕುರಿತು  ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರು ಆದೇಶಿಸಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿರುವುದಾಗಿ ಜಿ.ಸಿ ಚಂದ್ರ ಶೇಖರ್ ತಿಳಿಸಿದ್ದಾರೆ.

Key words:  Congress, expels, rebel candidates

Tags :
MLC-elections-Congress-expels-rebel candidates
Next Article